Breaking News

‘ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್‌ ನೀಡಬೇಕಿದೆ.

Spread the love

ಬಾಗಲಕೋಟೆ: ‘ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ 30 ರಷ್ಟು ಕಮಿಷನ್‌ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ’ ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

 

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಮಠಗಳಿಗೆ ಬಿಡುಗಡೆ ಆದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಆ ಅಧಿಕಾರಿಗಳು ಬಂದು ನಮಗೆ ಹೇಳುತ್ತಾರೆ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸವಂತೂ ಆಗುವುದಿಲ್ಲ ಎನ್ನುತ್ತಾರೆ’ ಎಂದು ಬೇಸರ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟಿಸಿದ ಡಿಸಿಎಂ ಡಿಕೆಶಿ

Spread the loveಬೆಂಗಳೂರು: ಹೆಬ್ಬಾಳ ಮೇಲ್ಸೇತುವೆಯ ಎರಡನೇ ಲೂಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.‌ ಆ ಮೂಲಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ