ಮುಂಬೈ: ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ರ ಪತ್ನಿ ರಜನಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮುಂಬೈನ ಕುರ್ಲಾ ಪೂರ್ವದ ನೆಹರು ನಗರದ ಡಿಗ್ನಿಟಿ ಕೋ ಆಪರೇಟಿವ್ ಹೌಸಿಂಗ್ ಸೊಸೈಟಿಯಲ್ಲಿರುವ ಶಾಸಕರ ಫ್ಲಾಟ್‌ನಲ್ಲಿ ಭಾನವಾರ ರಾತ್ರಿ 8.30ರ ಸುಮಾರಿಗೆ ಶಾಸಕರ ಪತ್ನಿಯ ಶವ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಶಾಸಕರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಬಂದ ಮುಂಬೈ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಭಾನುವಾರ ರಾತ್ರಿ ಆ ಮನೆಯಲ್ಲಿ ಆಗಿದ್ದೇನು? ಸಾವಿಗೆ ಕಾರಣ ಏನು? ಎಂಬಿತ್ಯಾದಿ ಪ್ರಶ್ನೆಗಳಿಗೆ ತನಿಖೆ ಬಳಿಕ ಉತ್ತರ ಸಿಗಲಿದೆ. ಮಂಗೇಶ್ ಕುಡಾಲ್ಕರ್ ಅವರು ಕುರ್ಲಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.