ಬೆಂಗಳೂರು: ‘ಹುಬ್ಬಳ್ಳಿ ಘಟನೆಗೆ ಸಂಬಂಧಿಸಿದಂತೆ ಎಲ್ಲರನ್ನೂ ಬಂಧಿಸಿದ್ದೇವೆ.
ಪ್ರಕರಣದ ತನಿಖೆ ನಡೆಯುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ, ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಬೆಳಿಗ್ಗೆ ಅವರು ಮಾತನಾಡಿದರು.
ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಅಕ್ರಮ ನಡೆದ ಬಗ್ಗೆ ಹಲವು ದೂರುಗಳು ಬಂದಿದ್ದವು. ತಕ್ಷಣ ಗೃಹ ಸಚಿವರು ಸಿಐಡಿಗೆ ತನಿಖೆ ವಹಿಸಿದ್ದಾರೆ. ನಾವೇ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ. ಬೇರೆ ಸರ್ಕಾರವಾದರೆ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ’ ಎಂದರು.