ರಾಜ್ಯದಲ್ಲಿ 40% ಕಮಿಷನ್ ಸರಕಾರ ಇದ್ದು, ಕಮಿಷನ್ ಕಿರುಕುಳಕ್ಕೆ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಿಕ್ಕೋಡಿಯಲ್ಲಿಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲಕಾಂಗ್ರೆಸ್ ಪಕ್ಷದ ಹೋರಾಟದ ಬಳಿಕ ಈಶ್ವರಪ್ಪ ಅವರನ್ನ ಬಂಧಿಸಬೇಕು ಎನ್ನುವದು ಕಾಂಗ್ರೆಸ್ ಪಕ್ಷದ ಆಗ್ರಹವಾಗಿದ್ದು, ಇದೀಗ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಭ್ರμÁ್ಟಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಾಗಬೇಕು ಎಂದು ಗುತ್ತಿಗೆದಾರರು ಬೆದರಿಕೆ ಹಾಕುತ್ತಿದ್ದಾರೆ ಎಂದರು.
ಸಚಿವರನ್ನು ಬಿಟ್ಟು ಶೇ. 40 ರಷ್ಟು ಕಮಿಷನ್ ಪಡೆಯುತ್ತಿದ್ದಾರೆ. ಈ ಬಗ್ಗೆ ಚೌಕಿದಾರ ಏನು ಮಾಡುತ್ತಿದ್ದಾನೆ ಪ್ರಧಾನಿ ಯಾಕೆ ಮೌನರಾಗಿದ್ದು, ಅವರು ಕೂಡ ಈ ಭ್ರಷ್ಟಾಚಾರದಲ್ಲಿ ಸಮ್ಮತಿ ಇದ್ದ ಹಾಗೆ ಕಾಣುತ್ತದೆ ಎಂದು ಇದೇ ವೇಳೆ ಆರೋಪಿಸಿದರು.
ಕೆಂಪಣ್ಣ ಅವರು ಹೇಳಿರುವ ಪ್ರಕಾರ ಎಲ್ಲ ಸಚಿವರ ಮೇಲೆ ನ್ಯಾಯಾಂಗ ತನಿಖೆ ಆಗಬೇಕು, ಈಗಾಗಲೇ ಪ್ರತಿ ಜಿಲ್ಲೆಯಲ್ಲೂ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದು, ರಾಜ್ಯದಲ್ಲಿರುವ 40% ಕಮಿಶನ್ ಹೋಗಲಾಡಿಸಬೇಕು. ಸದ್ಯ ರಾಜ್ಯದಲ್ಲಿ ಅಭಿವೃದ್ಧಿ, ಆಡಳಿತ ರಾಜ್ಯದಲ್ಲಿ ಇಲ್ಲ ಎಂದು ಇದೇ ವೇಳೆ ಕಿಡಿಕಾಡಿದರು.