ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
‘ಮಠ ಗಳಿಗೆ ಅನುದಾನ ಬಿಡುಗಡೆಗೂ ಶೇಕಡಾ 30 ಕಮಿಷನ್ ನೀಡಬೇಕು’ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಬಗ್ಗೆ ವಿಧಾನ ಸೌಧದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, ”ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಉತ್ತಮ ಸ್ವಾಮೀಜಿ, ದೊಡ್ಡ ತಪಸ್ವಿಗಳು. ಒಳ್ಳೆ ಹಿನ್ನೆಲೆ ಇದೆ ಅವರಿಗೆ. ಎಲ್ಲಿ ಯಾರಿಗೆ ಎಷ್ಟು ಪರ್ಸೆಂಟ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ. ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.
”ಅವರ ಮಾತಿಗೆ ಬೆಲೆ ಕೊಡುತ್ತಿದ್ದೇವೆ, ಯಾವ ಮಠಾಧೀಶರು ಯಾರಿಗೆ ಕೊಟ್ಟಿದ್ದಾರೆ ದಾಖಲೆ ಕೊಡಲಿ. ಅದರ ಆಳಕ್ಕೆ ಹೋಗುತ್ತೇವೆ, ಸಂಪೂರ್ಣ ತನಿಖೆ ಮಾಡುತ್ತೇವೆ” ಎಂದರು.