ನವದೆಹಲಿ: ಗುರು ತೇಗ್ ಬಹಾದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ಕೆಂಪು ಕೋಟೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ಮೊಘಲರ ಕಾಲದ ಸ್ಮಾರಕದಲ್ಲಿ ಸೂರ್ಯಾಸ್ತ ನಂತರ ಭಾಷಣ ಮಾಡಿದ ಮೊದಲ ಪ್ರಧಾನಿ ಎಂದೆನಿಸಿಕೊಳ್ಳಲಿದ್ದಾರೆ.
ರಾಷ್ಟ್ರವನ್ನು ಉದ್ದೇಶಿಸಿ ಪಿಎಂ ಮೋದಿ ಕೆಂಪು ಕೋಟೆಯ ಮೇಲೆ ಭಾಷಣ ಮಾಡುವ ಬದಲು ಹುಲ್ಲುಹಾಸಿನ ಮೇಲೆ ಮಾತನಾಡುತ್ತಿರುವುದು ವಿಶೇಷವಾಗಿದೆ.
ಸಂಸ್ಕೃತಿ ಸಚಿವಾಲಯದ ಅಧಿಕೃತ ಮಾಹಿತಿ ಪ್ರಕಾರ, 1675ರಲ್ಲಿ 9ನೇ ಸಿಖ್ ಗುರು ತೇಗ್ ಬಹಾದೂರ್ ಅವರಿಗೆ ಮೊಘಲ್ ದೊರೆ ಔರಂಗಜೇಬ್ ಮರಣದಂಡನೆ ಘೋಷಿಸಿದ ಸ್ಥಳ ಇದಾಗಿದೆ.
ಸಾಮಾನ್ಯವಾಗಿ ಸ್ವಾತಂತ್ರ್ಯ ದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿಗಳು ಕೆಂಪು ಕೋಟೆಯ ಮೇಲೆ ಭಾಷಣ ಮಾಡುತ್ತಾರೆ.