ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭಾದ ವಿಪಕ್ಷ ನಾಯಕ ಸಿದ್ದರಾಮಯ್ಯನವರ ನಡುವೆ ಸರಣಿ ಟ್ವೀಟ್ ಸಮರ ಈಗ ತಾರಕಕ್ಕೇರಿದೆ.ಈಗ ಕುಮಾರಸ್ವಾಮಿ ಅವರ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ ‘ನಿತ್ಯ ನನ್ನ ವಿರುದ್ಧ ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ?
ಎಂದು ಮೊದಲು ಹೇಳಿ’ ಎಂದು ಪ್ರಶ್ನಿಸಿದ್ದಾರೆ.
‘ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ.ನಿತ್ಯ ನನ್ನ ವಿರುದ್ದ ನಂಜುಕಾರುತ್ತಿರುವ ಹೆಚ್.ಡಿ. ಕುಮಾರಸ್ವಾಮಿಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ.ಕುಮಾರಸ್ವಾಮಿಯವರೇ, ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ.ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಅವರು ಪ್ರಶ್ನಿಸಿದ್ದಾರೆ.