ಹುಬ್ಬಳ್ಳಿ: ವಾಟ್ಸ್ಆಯಪ್ನಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿಕೊಂಡಿದ್ದ ಆರೋಪಿ, ಆನಂದನಗರ ನಿವಾಸಿ ಅಭಿಷೇಕ ಹಿರೇಮಠಗೆ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.
ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಭಿಷೇಕ ಅವಹೇಳನಕಾರಿ ಸ್ಟೇಟಸ್ ಇಟ್ಟಿದ್ದ ಆರೋಪದಡಿ ಬಂಧಿತನಾಗಿದ್ದಾನೆ.
ಈತನಿಗೆ ಏ.22ರಿಂದ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಕೀಲ ಸಂಜು ಬಡಸ್ಕರ 4ನೇ ಅಧಿಕ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.
ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಿದೆ. ಆದರೆ, ಅಭಿಷೇಕನಿಗೆ ಪರೀಕ್ಷೆ ಬರೆಯಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ಜೈಲಿನಲ್ಲೇ ಅಭ್ಯಾಸ ಮಾಡಲು ಪುಸ್ತಕ, ಮತ್ತಿತರ ವ್ಯವಸ್ಥೆ ಮಾಡಬೇಕು. ಸೂಕ್ತ ಬಂದೋಬಸ್ತ್ ಮೂಲಕ ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ ಎಂದು ಅಭಿಷೇಕ ಪರ ವಕೀಲ ಸಂಜು ಬಡಸ್ಕರ ‘ವಿಜಯವಾಣಿ’ಗೆ ತಿಳಿಸಿದ್ದಾರೆ.