: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ರಾಜನಂದಗಾಂವ್‌ಗೆ ಭೇಟಿ ನೀಡಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿ ಅಗತ್ಯ ಮಾರ್ಗಸೂಚಿಗಳನ್ನು ನೀಡಿದ್ದಾರೆ.
ಸಿಂಧಿಯಾ ಜೊತೆ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜನಂದಗಾಂವ್ ಸಂಸದ ಸಂತೋಷ್ ಪಾಂಡೆ ಮತ್ತು ಎಲ್ಲಾ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಕೇಂದ್ರ ಸಚಿವ ಸಿಂಧಿಯಾ, ಕೇಂದ್ರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಅಧಿಕಾರಿಗಳು ಮತ್ತು ನೌಕರರಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದ್ದೇವೆ. ಸಭೆಯಲ್ಲಿ ಅಪೌಷ್ಟಿಕತೆ, ಅಭಿವೃದ್ಧಿ, ಶಿಕ್ಷಣ ಮತ್ತು ಉದ್ಯೋಗದ ವಿಷಯದ ಬಗ್ಗೆ ಚರ್ಚಿಸಲಾಗಿದೆ. ನಾವು ವಿಮಾನ ನಿಲ್ದಾಣಗಳನ್ನು ಮಾರಾಟ ಮಾಡುತ್ತಿಲ್ಲ. ಬದಲಿಗೆ ಗುತ್ತಿಗೆ ನೀಡುತ್ತಿದ್ದೇವೆ ಎಂದು ಹೇಳಿದರು.