Breaking News

ಹುಬ್ಬಳ್ಳಿ ಗಲಭೆ ಪ್ರದೇಶಕ್ಕೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಭೇಟಿ

Spread the love

ಹುಬ್ಬಳ್ಳಿ: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಗುರುವಾರ ಬೆಳಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ ನಗರದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.

 

ನಂತರ ದಿಡ್ಡಿ ಓಣಿಯ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು. ದೇಗುಲದ ಟ್ರಸ್ಟಿ ಮತ್ತು ಅರ್ಚಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದರು. ಮುಂದೆ ಹೀಗಾಗದಂತೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ. ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ. ಎನ್.ಆರ್. ಪುರುಷೋತ್ತಮ ಇದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ