ರಾಕಿ ಭಾಯ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಪ್ಯಾನ್ ಇಂಡಿಯಾ ಸಿನಿಮಾವನ್ನ ಇಡೀ ವಿಶ್ವ ಸಿನಿಮಾರಂಗ ಮೆಚ್ಚಿಕೊಂಡಿದೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಇಂಡಸ್ಟ್ರೀಯ ಘಟಾನುಘಟಿ ಸಿನಿಮಾ ಮೇಕರ್ಸ್, ನಟ-ನಟಿಯರು ಕೆಜಿಎಫ್ ಸಿನಿಮಾಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.
‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಇದರ ನಡುವೆ ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ಈ ಸಂಸ್ಥೆಯ ನಿರ್ಮಾಣದ “ಕೆಜಿಎಫ್ 2” ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ ಅನೇಕ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈಗ ಮತ್ತೊಂದು ಹೊಸ ಚಿತ್ರದ ಘೋಷಣೆಯಾಗಿದೆ. ವಿಶೇಷ ಏನೆಂದರೆ, ಈ ಬಾರಿ ‘ಹೊಂಬಾಳೆ ಫಿಲಂಸ್’ ಗೆ ಸಿನಿಮಾ ಮಾಡುವ ಅವಕಾಶ ಪಡೆದಿರುವುದು ಸುಧಾ ಕೊಂಗರ.