ರಾಯಚೂರು: ಮೂವರು ವಿಚಾರಣಾಧೀನ ಕೈದಿಗಳು ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಹರ್ಷ, ರಾಜೇಶ್ ಖನ್ನಾ ಮಯ ಹಾಗೂ ಗೋವಿಂದ ಪಲ್ಲು ಪರಾರಿಯಾದ ವಿಚಾರಣಾಧೀನ ಕೈದಿಗಳು.
ಏನಿದು ಪ್ರಕರಣ..?
ಈ ಮೂವರು ಆರೋಪಿಗಳು ಗ್ಯಾಂಗ್ ಕಟ್ಟಿಕೊಂಡು ರಾಬರಿ ಮತ್ತು ಕೊಲೆ ಮಾಡಿರುವ ಆರೋಪ ಇದೆ. ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಇವರನ್ನ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು.
ವಿಚಾರಣೆ ಮುಗಿದ ಬಳಿಕ ಜೈಲಿಗೆ ವಾಪಸ್ ಕರೆದುಕೊಂಡು ಹೋಗುತ್ತಿದ್ದಾಗ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಎಸ್ಕೇಪ್ ಆಗಿರುವ ವಿಚಾರಣಾಧೀನ ಕೈದಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.