Breaking News

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣದಲ್ಲಿ ಕೊನೆಗೂ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣದಲ್ಲಿ ಕೊನೆಗೂ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಮನೆ ಮೇಲೆ ದಾಳಿ ಮಾಡಿದ ಬಳಿಕ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲೇ ಇದ್ದರು. ಮಧ್ಯಾಹ್ನದಿಂದ ಪೊಲೀಸರು ನಿರಂತರ ವಿಚಾರಣೆ ನಡೆಸುತ್ತಿದ್ದರು.

ಸಂಜೆ ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಸುದ್ದಿಗೋಷ್ಠಿ ನಡೆಸಿ ರವಿಶಂಕರ್‌ ಮತ್ತು ರಾಹುಲ್‌ ಇಬ್ಬರನ್ನು ಅರೆಸ್ಟ್‌ ಮಾಡಿದ್ದೇವೆ. ರಾಗಿಣಿಯ ಮೇಲೆ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿಸಿದ್ದರು

ಎಫ್‌ಐಆರ್‌ ದಾಖಲಾದ ಬಳಿಕ ರಾಗಿಣಿ ಬಂಧನ ಯಾಕೆ ನಡೆದಿಲ್ಲ ಎಂಬ ಪ್ರಶ್ನೆ ಎದ್ದಿತ್ತು. ಈ ನಡುವೆ ಪ್ರಭಾವಿ ರಾಜಕಾರಣಿಯೊಬ್ಬರು ರಾಗಿಣಿಯನ್ನು ಬಂಧಿಸದಂತೆ ಒತ್ತಡ ಹೇರುತ್ತಿದ್ದಾರೆ ಎಂಬ ವಿಚಾರ ಮೂಲಗಳಿಂದ . ಆದರೆ ಪ್ರಭಾವಿ ರಾಜಕಾರಣಿಯ ಒತ್ತಡಕ್ಕೆ ಬಗ್ಗದ ಪೊಲೀಸರು ಕೊನೆಗೂ ರಾಗಿಣಿಯನ್ನು ಬಂಧಿಸಿದ್ದಾರೆ.

ಆರೋಪಿಗಳು ಡ್ರಗ್ಸ್‌ ದಂಧೆಯಲ್ಲಿ ರಾಗಿಣಿ ಪಾತ್ರ ಇದೆ ಎಂದು ಹೇಳಿದ್ದರೂ ಸರಿಯಾದ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಆದರೆ ಇಂದು ಮನೆಯ ಮೇಲೆ ನಡೆದ ದಾಳಿ ವೇಳೆ ಡ್ರಗ್ಸ್‌ ಪತ್ತೆಯಾಗಿತ್ತು. ಇದು ಪ್ರಬಲವಾದ ಸಾಕ್ಷ್ಯವಾಗಿದ್ದರಿಂದ ಪೊಲೀಸರು ಸಂಜೆ ರಾಗಿಣಿಯನ್ನು ಅರೆಸ್ಟ್‌ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ