Breaking News

ದೆಹಲಿಯ ಖಾಸಗಿ ಶಾಲೆಗಳ 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ: ಕೇಜ್ರಿವಾಲ್

Spread the love

ಬೆಂಗಳೂರು: ದೆಹಲಿಯಲ್ಲಿ ಈ ವರ್ಷ ಖಾಸಗಿ ಶಾಲೆಗಳನ್ನು ತೊರೆದು 4 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್‌ ಹೇಳಿದ್ದಾರೆ.

ನಗರದ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ರೈತರ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೆಹಲಿಯಲ್ಲಿ ಐದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳನ್ನು ಬದಲಾಯಿಸಿದ್ದೇವೆ.

ಈ ವರ್ಷ ನಾಲ್ಕು ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆಗಳನ್ನು ತೊರೆದು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ. ದೆಹಲಿಯಲ್ಲಿ ಆಸ್ಪತ್ರೆಗಳ ಪರಿಸ್ಥಿತಿಯೂ ಹದಗೆಟ್ಟಿತ್ತು. ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ದೆಹಲಿಯ 2 ಕೋಟಿ ಜನರಿಗೆ, ಎಲ್ಲ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ವಿವರಿಸಿದರು.

ಈ ಹಿಂದೆ ದಿನಕ್ಕೆ 8 ಗಂಟೆಗಳ ಕಾಲ ವಿದ್ಯುತ್‌ ಕಡಿತ ಮಾಡಲಾಗುತ್ತಿತ್ತು. ಈಗ 24 ಗಂಟೆ ಉಚಿತವಾಗಿ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ ಎಂದು ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ