Breaking News

ಊಟ, ಬಟ್ಟೆ ಎಲ್ಲವನ್ನು ವಾಪಸ್ ಊಟ ಕೊಡಲು ಪೊಲೀಸರು ಅವಕಾಶ ನೀಡಲಿಲ್ಲ

Spread the love

ಬೆಂಗಳೂರು: ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಿದ್ದಾರೆ.

ಹೀಗಾಗಿ ಮಧ್ಯರಾತ್ರಿ ಮಗಳನ್ನು ನೋಡಲು ನಟಿ ರಾಗಿಣಿ ಪೋಷಕರು ಹೋಗಿದ್ದರು.ಮಧ್ಯರಾತ್ರಿಯಲ್ಲಿ ರಾಗಿಣಿ ಭೇಟಿ ಮಾಡಲು ಪೋಷಕರು ದೌಡಾಯಿಸಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಂದು ಗೇಟ್‍ನಲ್ಲಿ ಕಾದು ನಿಂತಿದ್ದರು. ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಮತ್ತು ತಂದೆ ರಾಕೇಶ್ ದ್ವಿವೇದಿ ಸಾಂತ್ವನ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೇ ಮಗಳು ರಾಗಿಣಿಗಾಗಿ ಊಟಕ್ಕಾಗಿ ಪಾಸ್ತಾ, ನೀರಿನ ಬಾಟಲ್ ಹಾಗೂ ಬಟ್ಟೆ ತಂದಿದ್ದರು.

ಮಗಳಿಗೆ ಊಟ ಕೊಡಲು ಪೊಲೀಸರು ಅವಕಾಶ ನೀಡಲಿಲ್ಲ. ಕೊನೆಗೆ ಊಟ, ಬಟ್ಟೆ ಎಲ್ಲವನ್ನು ವಾಪಸ್ ತೆಗೆದುಕೊಂಡು ಪೋಷಕರು ಮನೆಗೆ ಹೋಗಿದ್ದಾರೆ. ಇನ್ನೂ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಯಲ್ಲೇ ನಟಿ ರಾಗಿಣಿ ಇರಲಿದ್ದಾರೆ. ಹೀಗಾಗಿ ಇಂದು ಕೂಡ ಸಿಸಿಬಿ ಪೊಲೀಸರು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ವಿಚಾರಣೆ ಮುಗಿದ ನಂತರ ಸಿಸಿಬಿ ಪೊಲೀಸರು ಶುಕ್ರವಾರ ರಾತ್ರಿ ಬಿಗಿ ಭದ್ರತೆಯೊಂದಿಗೆ ಡೈರಿ ಸರ್ಕಲ್ ಬಳಿ ಇರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ರಾಗಿಣಿಯನ್ನು ಕರೆದುಕೊಂಡು ಹೋಗಿದ್ದಾರೆ. ರಾಗಿಣಿ ಜೊತೆ ಸಾಂತ್ವನ ಕೇಂದ್ರದಲ್ಲಿಯೇ ಇಬ್ಬರು ಮಹಿಳಾ ಪೊಲೀಸರು ಉಳಿದುಕೊಂಡಿದ್ದಾರೆ.


Spread the love

About Laxminews 24x7

Check Also

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Spread the loveಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ  ಡಿಜಿಟಲ್ ಪೇಮೆಂಟ್  ಜಾರಿ ಮಾಡಲು ಕ್ರಮವಹಿಸುತ್ತೇವೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ