Breaking News

ಹುಬ್ಬಳ್ಳಿಯಲ್ಲಿ ಡಿಜೆ ಹಳ್ಳಿ ಕೆಜೆ ಹಳ್ಳಿ ಮಾದರಿಯಲ್ಲಿಯೇ ಗಲಭೆ ಮಾಡುವ ಪ್ರಯತ್ನ

Spread the love

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತಂದು ನಾಗರಿಕರಿಗೆ ತಮ್ಮ ಹಕ್ಕುಗಾರಿಕೆ ಮೇಲೆ ನಿಯಂತ್ರಣ ಸಾಧಿಸಲು ಅವಶ್ಯಕ ಬದಲಾವಣೆಯನ್ನು ಮಾಡಿ ಸಶಕ್ತಗೊಳಿಸುವುದು ಸರ್ಕಾರದ ಆಡಳಿತ ಸುಧಾರಣೆಯ ಉದ್ದೇಶ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ಹೇಳಿದ್ದಾರೆ.

 

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, ಸಾರ್ವಜನಿಕರಿಗೆ ಸ್ವಯಂ ಸೇವೆಯ(Self service) ಮುಖಾಂತರ ಸರ್ಕಾರದ ಸೇವಾ ಸೌಲಭ್ಯವನ್ನು ಪಡೆಯಲು ವ್ಯವಸ್ಥೆ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ನಾಗರಿಕರು 1) 11ಇ ಸ್ಕೆಚ್, 2) ತತ್ಕಾಲ್ ಪೋಡಿ, 3) ವಿಭಾಗ- ಹಾಲಿ ಹೊಂದಿರುವ ಕೃಷಿ ಜಮೀನಿನಲ್ಲಿ ತಮ್ಮ ಶಾಸನಾತ್ಮಕ ಹಕ್ಕಿನಂತೆ ವೈಯಕ್ತಿಕ ಭಾಗಾಂಶವನ್ನು ತೋರಿಸುವ ಸಂಬಂಧ ಸ್ಕೆಚ್, 4) ಭೂಪರಿವರ್ತನಾ ಪೂರ್ವ ಸ್ಕೆಚ್ ಗಳಿಗಾಗಿ ಭೂಮಾಪನ ಇಲಾಖೆಗೆ ಅವರ ಸ್ವಂತ ಜಮೀನಿನ ನಕ್ಷೆಗಾಗಿ ಅರ್ಜಿ ಸಲ್ಲಿಸುತ್ತಾರೆ.

ಪ್ರಸ್ತುತ ಜನರಿಗೆ ತಮ್ಮ ಸ್ವಂತ ಖಾಸಗಿ ಜಮೀನುಗಳಲ್ಲಿ ಮೇಲ್ಕಂಡ ಸ್ಕೆಚ್ ಗಳಿಗಾಗಿ ಸಲ್ಲಿಸುವ ಅರ್ಜಿಗಳನ್ನು ಸರ್ಕಾರಿ ಭೂಮಾಪಕರು ಅಥವಾ ಪರವಾನಗಿ ಭೂಮಾಪಕರುಗಳಿಂದ ಸಿದ್ಧಪಡಿಸಲಾಗುತ್ತದೆ. ಸರ್ಕಾರಿ ಭೂಮಾಪಕರು ಮತ್ತು ಪರವಾನಗಿ ಭೂಮಾಪಕರ ಸಂಖ್ಯೆಯು ಸೀಮಿತವಾಗಿದ್ದು, ಪ್ರತಿ ತಿಂಗಳು ಒಂದು ಲಕ್ಷಕ್ಕಿಂತ ಹೆಚ್ಚಿನ ಅರ್ಜಿಗಳು ನಾಗರಿಕರಿಂದ ಸ್ವೀಕೃತವಾಗುತ್ತವೆ. ಇದರೊಂದಿಗೆ ಹೆಚ್ಚುವರಿಯಾಗಿ ಆರು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯ ಅರ್ಜಿಗಳು ಅಳತೆಗಾಗಿ ವಿವಿಧ ಹಂತಗಳಲ್ಲಿ ಬಾಕಿ ಇರುತ್ತವೆ.

 

ಇದರಿಂದಾಗಿ ನಾಗರಿಕರು ತಮ್ಮ ಸ್ವಂತ ಜಮೀನಿನಲ್ಲಿ ಯಾವುದೇ ರೀತಿಯ ಕ್ರಯ ಮತ್ತು ವಿಭಾಗ ಮಾಡಿಸಿಕೊಳ್ಳಲು ಅಗತ್ಯವಿರುವ ಸ್ಕೆಚ್ ಗಾಗಿ ಹಲವಾರು ತಿಂಗಳುಗಳು ಮತ್ತು ಕೆಲವೊಮ್ಮೆ ವರ್ಷದವರೆಗೆ ಕಾಯಬೇಕಾಗುತ್ತದೆ. ಇದೆಲ್ಲ ಸಮಸ್ಯೆಗೆ ಪರಿಹಾರ ನೀಡಲು ನಾಗರಿಕರೇ ತಮ್ಮ ಜಮೀನಿಗೆ ಸ್ವಂತ ನಕ್ಷೆ ಮಾಡಿಕೊಳ್ಳಲು ಕಂದಾಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ. 11E ಸ್ಕೆಚ್, ತತ್ಕಾಲ ಪೋಡಿ ಇವುಗಳನ್ನು ಜನರು ಸ್ವಂತ ಜಮೀನಿಗೆ ತಾವೇ ಮಾಡಿಕೊಳ್ಳಲು ಅವಕಾಶ ನೀಡುತ್ತಿದ್ದೇವೆ. ಇದರಿಂದ ಸರ್ವೇ ವಿಳಂಬವಾಗಿ, ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆ ಬಗೆಹರಿಯುತ್ತದೆ ಎಂದು ಅಶೋಕ್ ಅವರು ತಿಳಿಸಿದ್ದಾರೆ.

ಆಸ್ತಿ ನೋಂದಣಿಗೆ ಶೇ. 10ರಷ್ಟು ರಿಯಾಯಿತಿ ಅವಧಿ ವಿಸ್ತರಣೆ
ವಿವಿಧ ಸ್ಥಿರಾಸ್ತಿಗಳ ಮಾರಾಟ ಮತ್ತು ಖರೀದಿ ಮಾಡುವವರಿಗೆ ನೀಡಲಾಗಿದ್ದ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ರಿಯಾಯಿತಿ ಮುಂದುವರಿಕೆಯಾಗಿದ್ದು, ಶೇ 10 ರಷ್ಟು ರಿಯಾಯತಿ ಮುಂದುವರೆಸುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಜನವರಿ 1, 2022 ರಿಂದ ಮಾರ್ಚ್ 31, 2022 ರವರೆಗೆ ಮಾರ್ಗಸೂಚಿ ದರದಲ್ಲಿ ಶೇ. 10ರಷ್ಟು ರಿಯಾಯತಿ ನೀಡಲಾಗಿತ್ತು. ಈ ರಿಯಾಯಿತಿ ಮುಂದುವರಿಸುವಂತೆ ಜನರಿಂದ ಬೇಡಿಕೆ ಬಂದಿದ್ದರಿಂದ ಮುಂದಿನ ಮೂರು ತಿಂಗಳು ಏಪ್ರಿಲ್ 25, 2022 ರಿಂದ ಜುಲೈ 24, 2022ರವರೆಗೆ ಗೈಡ್​ಲೈನ್ಸ್​ ವ್ಯಾಲ್ಯೂ ನಲ್ಲಿ ಶೇ. 10ರಷ್ಟು ರಿಯಾಯತಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ