Breaking News

ಪರೀಕ್ಷೆ ಬರೆದವರ ಬಗ್ಗೆ ಯೋಚಿಸೋಣ, ಬರೆಯದವರ ಬಗೆಗಲ್ಲ’-ಬಿ.ಸಿ. ನಾಗೇಶ್

Spread the love

ಬೆಂಗಳೂರು: ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಪಟ್ಟು ಹಿಡಿದು ಅವಕಾಶ ನಿರಾಕರಣೆ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯದೆ ವಾಪಸಾದ ವಿದ್ಯಾರ್ಥಿನಿಯರಿಬ್ಬರ ವರ್ತನೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಪರೀಕ್ಷೆ ಮತ್ತು ಶೈಕ್ಷಣಿಕ ಭವಿಷ್ಯದ ಪ್ರಾಮುಖ್ಯತೆಯನ್ನು ಅರ್ಥ ಮಾಡಿಸುವಲ್ಲಿ ಆರಂಭದಿಂದಲೂ ಶ್ರಮ ವಹಿಸಲಾಗಿತ್ತು. ಪರೀಕ್ಷಾ ದಿನದಂದು ಕೂಡಾ ಒಂದು ಗಂಟೆಗೂ ಹೆಚ್ಚು ಕಾಲ ಇಬ್ಬರು ವಿದ್ಯಾರ್ಥಿನಿಯರ ಮನವೊಲಿಸಲಾಗಿದೆ. ಅಲ್ಲದೆ ಅವರ ಧರ್ಮದವರೇ ಬೆಂಗಳೂರಿನಿಂದ ಆಗಮಿಸಿ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿನಿಯರಿಗೆ ತಿಳಿ ಹೇಳಿದ್ದಾರೆ. ಹಾಗಿದ್ದಾಗ್ಯೂ ನಮಗೆ ಧರ್ಮವೇ ಮುಖ್ಯ ಎಂದು ಪರೀಕ್ಷೆ ಬರೆಯದೆ ತೆರಳಿರುವುದು ಸರಿಯಲ್ಲ ಎಂದು ಶಿಕ್ಷಣ ಸಚಿವರು ಹೇಳಿದರು.

ಪಿಎಫ್‌ಐ, ಸಿಎಫ್‌ಐ ಸಂಘಟನೆಗಳಿಂದ ಅವರ ಭವಿಷ್ಯ ಹಾಳಾಗುತ್ತಿದೆ. ಪರೀಕ್ಷೆ ಬರೆದವರ ಬಗ್ಗೆಯಷ್ಟೇ ಯೋಚಿಸಬೇಕು. ಈ ಆರು ಮಂದಿಯ ಬಗೆಗೆ ಯೋಚಿಸುವುದನ್ನು ನಿಲ್ಲಿಸುವುದೇ ಒಳ್ಳೆಯದು ಎಂದು ಅವರು ಇದೇ ವೇಳೆ ತಿಳಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ