Breaking News

ತಡರಾತ್ರಿ ಪಂಪ್​ಸೆಟ್ ಕದಿಯಲು ಬಂದ ಯುವಕರಿಬ್ಬರನ್ನು ಅಮಾನುಷವಾಗಿ ಕೊಂದ ತೋಟದ ಮಾಲೀಕ!

Spread the love

ತುಮಕೂರು: ರೈತರ ತೋಟದಲ್ಲಿ ಮೋಟಾರ್ ಪಂಪ್​ಸೆಟ್ ಕದಿಯಲು ಬಂದು ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಯುವಕರಿಬ್ಬರನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಲಾಗಿದೆ.

ಇಂತಹ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಸಂಭವಿಸಿದೆ.

ಪೆದ್ದನಹಳ್ಳಿ ಗ್ರಾಮದ ಅನಿಲ್ (32) ಮತ್ತು ಮಂಚಲದೋರೆ ಗ್ರಾಮದ ಅನಿಲ್(33) ಕೊಲೆಯಾದ ಯುವಕರು.

ಆಟೋ ಚಾಲಕನಾಗಿದ್ದ ಅನಿಲ್, ಪೆದ್ದನಹಳ್ಳಿ ಸುತ್ತಮುತ್ತ ಆಟೋ ಓಡಿಸಿಕೊಂಡಿದ್ದ. ಮೂರು ತಿಂಗಳ ಹಿಂದೆ ಅನಿಲ್ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಮೇಲೆ ಬೈಕ್ ಕಳ್ಳತನದ ಕೇಸ್ ದಾಖಲಾಗಿತ್ತು. ಮೂರು ತಿಂಗಳು ಜೈಲುಶಿಕ್ಷೆ ಅನುಭವಿಸಿ ಹೊರಬಂದಿದ್ದ ಅನಿಲ್​, ಗುರುವಾರ ಸಂಜೆ ಮಂಚಲದೊರೆ ಗ್ರಾಮದ ಅನಿಲ್ ಎಂಬಾತನನ್ನು ಪೆದ್ದನಹಳ್ಳಿಗೆ ಕರೆಸಿಕೊಂಡಿದ್ದ. ಇಬ್ಬರೂ ಮನೆಯಲ್ಲಿ ಒಟ್ಟಿಗೆ ಊಟ ಮಾಡಿ ರಾತ್ರಿ 11 ಗಂಟೆ ಸುಮಾರಿಗೆ ಪೆದ್ದನಹಳ್ಳಿ ಗ್ರಾಮದ ತೋಟದಲ್ಲಿ ಮೋಟರ್ ಪಂಪ್​ಸೆಟ್ ಕದಿಯಲು ಹೋಗಿದ್ದರು.

ಈ ವೇಳೆ ಯುವಕರಿಬ್ಬರೂ ತೋಟದ ಮಾಲೀಕನ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದಿದ್ದು, ಮಾಲೀಕನ ಕಡೆಯವರು ತಡ ರಾತ್ರಿಯವರೆಗೂ ಯುವಕರ ಬಟ್ಟೆಬಿಚ್ಚಿ ಅಮಾನುಷವಾಗಿ ಥಳಿಸಿ ಕೊಲೆ ಮಾಡಿದ್ದಾರೆ. ಮೃತದೇಹಗಳನ್ನು ತೋಟದಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿ ಅಂದರೆ ಒಬ್ಬನ ಶವ ಪೆದ್ದನಹಳ್ಳಿಯ ನೀರಿನ ಕಟ್ಟೆ ಬಳಿ, ಮತ್ತೊಬ್ಬನ ಶವ ನೀರಿನ ಕಟ್ಟೆಯ ರಸ್ತೆಬದಿ ಬಿಸಾಡಿ ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ