Breaking News

ಪೆಟ್ರೋಲ್ ಟ್ಯಾಂಕ್​ ಮೇಲೆ ಪ್ರೇಯಸಿ, ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್​: ಪ್ರೇಮಿ ಮೇಲೆ 3 ಕೇಸ್​.

Spread the love

ಚಾಮರಾಜನಗರ: ಪೆಟ್ರೋಲ್ ಟ್ಯಾಂಕ್ ಮೇಲೆ ಪ್ರೇಯಸಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತ ರೊಮ್ಯಾನ್ಸ್ ಮಾಡಿದ್ದ ಪ್ರೇಮಿಯ ಮೇಲೆ ಮೂರು ಕೇಸ್​ಗಳು ಬಿದ್ದಿವೆ. ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

 

ಯುವಕನೊಬ್ಬ ಬೈಕ್​ ಟ್ಯಾಂಕ್​ ಮೇಲೆ ಯುವತಿಯನ್ನು ಕೂರಿಸಿಕೊಂಡು ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್ ಮಾಡಿದ್ದ ವಿಡಿಯೋ ಇಂದು ವೈರಲ್​ ಆಗಿತ್ತು. ಹಾಡಹಗಲೇ ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಅಪಾಯಕಾರಿಯಾಗಿ ಹಾಗೂ ಅಸಭ್ಯವಾಗಿ ನಡೆದುಕೊಂಡಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಚಾಮರಾಜನಗರ ಸಂಚಾರ ಠಾಣೆ ಪೊಲೀಸರು ಮೋಟಾರು ನಿಯಮ ಕಾಯ್ದೆಯಡಿ ಹೆಚ್.ಡಿ.ಕೋಟೆಯ ಶಿವಪುರ ಗ್ರಾಮದ ಸ್ವಾಮಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈತ ಯುವತಿ ಜೊತೆಗೆ ಜಾಲಿ ರೈಡ್ ಬಂದಿದ್ದಾಗಿ ಒಪ್ಪಿಕೊಂಡಿದ್ದು, ಅಜಾಗರೂಕತೆಯ ಚಾಲನೆ, ಹೆಲ್ಮೆಟ್​ ರಹಿತ ಚಾಲನೆ ಹಾಗೂ ಅಪಾಯಕಾರಿ ಚಾಲನೆ ಎಂಬುದಾಗಿ ಮೂರು ಕೇಸ್​ಗಳನ್ನು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಕಾಮಗಾರಿ ಕೈಗೊಳ್ಳಿ :ಶಾಸಕ ರಾಜು ಶೆಠ್

Spread the love ಫ್ಲೈಓವರ್ ಕಾಮಗಾರಿಗೆ ಸಂಬಂಧಿಸಿದ ಪ್ರಮುಖ ಪ್ರದೇಶಗಳ ಪರಿಶೀಲನೆ ನಾಗರಿಕರ ಸುರಕ್ಷತೆ, ತುರ್ತು ಸೇವೆಗಳ ಪ್ರವೇಶ ಮಾರ್ಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ