Breaking News

ಅರುಂಧತಿ ನಕ್ಷತ್ರ ಬದಲು ಪುನೀತ್ ಫೋಟೋ ನೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

Spread the love

ಚಿಕ್ಕೋಡಿ(ಬೆಳಗಾವಿ): ರಾಜರತ್ನ ಪುನೀತ್ ಸಾವನ್ನಪ್ಪಿ ಕೆಲ ತಿಂಗಳುಗಳು ಕಳೆದರೂ ಅಪ್ಪು ಮೇಲಿನ ಅಭಿಮಾನ ಮಾತ್ರ ಕಡಿಮೆಯಾಗಿಲ್ಲ. ಪುನೀತ್ ರಾಜ್‍ಕುಮಾರ್ ಅವರ ಅಪ್ಪಟ್ಟ ಅಭಿಮಾನಿಯೋರ್ವ ತನ್ನ ವಿವಾಹದ ದಿನಂದಂದು ರಾಜರತ್ನನಿಗೆ ವಿಭಿನ್ನವಾಗಿ ನಮನ ಸಲ್ಲಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ಆನಂದ ಪಟ್ಟಣ ಹಾಗೂ ಜ್ಯೋತಿ ಎನ್ನುವ ಯುವ ಜೋಡಿ ಪುನೀತ್ ಅವರ ನೆನಪಿನಲ್ಲಿ ವಿಶೇಷವಾಗಿ ವಿವಾಹವಾಗಿದ್ದಾರೆ. ರಾಯಬಾಗ ಪಟ್ಟಣದಲ್ಲಿ ಅದ್ದೂರಿಯಾಗಿ ನಡೆದ ವಿವಾಹ ಸಮಾರಂಭ ಸಂಪೂರ್ಣವಾಗಿ ಪುನೀತ್ ಮಯವಾಗಿತ್ತು.

ಮದುವೆ ಸಮಾರಂಭ ನಡೆಯುವ ಕಲ್ಯಾಣ ಮಂಟಪ ಪುನೀತ್ ಭಾವಚಿತ್ರಗಳಿಂದ ರಾರಾಜಿಸುತ್ತಿತ್ತು. ಮದುವೆ ಸಮಾರಂಭದ ವೇದಿಕೆಯಲ್ಲೂ ಪುನೀತ್ ಭಾವಚಿತ್ರವನ್ನ ಹೂವಿನ ಅಲಂಕಾರದಿಂದ ಶೃಂಗಾರ ಮಾಡಲಾಗಿತ್ತು. ವಿಶೇಷವೆಂದರೆ ಈ ಯುವ ಜೋಡಿಗಳು ಅರುಂಧತಿ ನಕ್ಷತ್ರ ನೋಡುವ ಬದಲು ಪುನೀತ್ ಭಾವಚಿತ್ರವನ್ನ ನೋಡಿ ನವಜೀವನಕ್ಕೆ ಕಾಲಿಟ್ಟಿದೆ.ಹೌದು ಬಹುತೇಕ ಮದುವೆ ಸಮಾರಂಭಗಳಲ್ಲಿ ನವ ವಧು-ವರರು ಅರುಂಧತಿ ನಕ್ಷತ್ರ ನೋಡುವುದು ವಾಡಿಕೆ. ಆದರೆ ಈ ಜೋಡಿ ಪುನೀತ್ ಭಾವಚಿತ್ರವನ್ನೇ ಅರುಂಧತಿ ನಕ್ಷತ್ರ ಎಂದು ನೋಡಿ ಆಶೀರ್ವಾದ ಪಡೆದರು. ಪುನೀತ್ ಅಪ್ಪಟ ಅಭಿಮಾನಿಯಾಗಿರುವ ಆನಂದ್‍ಗೆ ಆತನ ಸ್ನೇಹಿತರು ಪುನೀತ್ ಭಾವಚಿತ್ರ ಇರುವ ವಿವಿಧ ಉಡುಗೊರೆಗಳನ್ನು ನೀಡಿ ಸಂತಸಪಟ್ಟರು. ಆನಂದ್ ಪಟ್ಟಣ ಅವರ ಸ್ನೇಹಿತರು ಪುನೀತ್ ಹಾಡುಗಳನ್ನ ಹಾಡಿ ಮದುವೆಗೆ ಮತ್ತಷ್ಟು ಕಳೆ ತಂದರು.


Spread the love

About Laxminews 24x7

Check Also

ತಂದೆಯ ಅಗಲಿಕೆಯ ನೋವು: ಮನನೊಂದ ಮಗಳು ಆತ್ಮಹತ್ಯೆ

Spread the love ಚಿಕ್ಕಬಳ್ಳಾಪುರ: ತಂದೆಯ ಅನಿರೀಕ್ಷಿತ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗದ ಪುತ್ರಿ ಪ್ರಾಣ ಬಿಟ್ಟಿದ್ದಾಳೆ. ತಂದೆಯ ಅಗಲಿಕೆಯ ನೋವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ