Breaking News
Home / ಜಿಲ್ಲೆ / ಬೆಂಗಳೂರು / ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ

Spread the love

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ ಇರಲಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.

 

ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್‌ ರಿಜಿಸ್ಟ್ರಾರ್‌ ಕೆ.ಎಸ್‌. ಭರತ್‌ ಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ. ರಜಾ ಕಾಲದ ನ್ಯಾಯಪೀಠಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಕಾರ್ಯ ನಿರ್ವಹಿಸಲಿವೆ.

ಧಾರವಾಡ ಹಾಗೂ ಕಲಬುರಗಿ ಪೀಠಗಳಲ್ಲಿ ಭೌತಿಕ ವಿಚಾರಣೆ ಇರುವುದಿಲ್ಲ. ಬದಲಿಗೆ ಈ ಪೀಠಗಳಲ್ಲಿ ದಾಖಲಾಗುವ ತುರ್ತು ಪ್ರಕರಣಗಳು ಬೆಂಗಳೂರಿನ ಪ್ರಧಾನ ಪೀಠದಲ್ಲಿ ಆನ್‌ಲೈನ್‌ ಮೂಲಕ ವಿಚಾರಣೆ ನಡೆಯಲಿವೆ. ಹಾಗಿದ್ದೂ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ ಪ್ರಕರಣ ದಾಖಲಿಸಲು ವಾರಪೂರ್ತಿ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10 ರಿಂದ 12ರ ನಡುವೆ ನೇರವಾಗಿ ಅಥವಾ ಇ-ಫೈಲಿಂಗ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ