Breaking News

ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ನಟಿ ಸಂಯುಕ್ತ ಹೆಗ್ಡೆ

Spread the love

ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರು ಮತ್ತು ಹಿರಿಯ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಸಾರ್ವಜನಿಕರ ವಿರುದ್ಧ ನಟಿ ಸಂಯುಕ್ತ ಕಿರುಚಾಡಿ ರಂಪ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟನ್ನು ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಈ ವೇಳೆ ಗೇಟ್ ಓಪನ್ ಮಾಡುವಂತೆ ಸಂಯುಕ್ತ ಮತ್ತು ಸಾರ್ವಜನಿಕರ ನಡುವೆ ಜಗಳವಾಗಿದೆ. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆಗ ತಕ್ಷಣ ಇನ್‍ಸ್ಟಾಗ್ರಾಮ್‍ನಲ್ಲಿ ಲೈವ್ ಬಂದ ಸಂಯುಕ್ತ, ನಾನು ಏನೂ ತಪ್ಪು ಮಾಡಿಲ್ಲ. ಇವರು ಸುಮ್ಮನೆ ನಮ್ಮನ್ನು ಕೂಡಿ ಹಾಕಿದ್ದಾರೆ ಎಂದು ದೂರಿದ್ದಾರೆ. ಆನಂತರ ಪೊಲೀಸರು ಬಂದು ಆಕೆಯನ್ನು ಮತ್ತು ಅವರ ಸ್ನೇಹಿತರನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ