Breaking News

PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು

Spread the love

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಖತರ್ ನಾಕ್ ಗ್ಯಾಂಗ್ ಲಾಡ್ಜ್ ನ ರೂಮ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

 

ಆರೋಪಿಗಳು ಬೆಂಗಳೂರಿನ ಲಾಡ್ಜ್ ನಲ್ಲಿ ಕುಳಿತು ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜತೆಯಲ್ಲಿಟ್ಟುಕೊಂಡು ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಹೇಳುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ.

 

ಪಿಎಸ್‌ಐ ನೇಮಕಾತಿ ಅಕ್ರಮದ ಹಿಂದೆ ಪ್ರಭಾವಿಗಳ ಕೈವಾಡವಿರುವುದು ಬಯಲಾಗುತ್ತಿದ್ದು, ಈಗಾಗಲೇ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಸಹೋದರರನ್ನು ಸಿಐಡಿ ಬಂಧಿಸಿದೆ. ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದು, ಆಕೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ನಡುವೆ ಅಕ್ರಮದ ಒಂದೊಂದೆ ಸಾಕ್ಷ್ಯಗಳು ಬಟಾಬಯಲಾಗುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ

Spread the loveಕುಡಿದ ನಶೆಯಲ್ಲಿ ವ್ಯಕ್ತಿಯ ತಲೆ ಮೇಲೆ ಕಲ್ಲು ಹಾಕಿ ಬರ್ಬರ ಕೊಲೆ ತಲೆ ಮೇಲೆ ಕಲ್ಲು ಎತ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ