ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಮಾಯಕ ಘಟನೆ ನಡೆದಿದ್ದು, 10 ಶ್ವಾನಗಳಿಗೆ ವಿಷ ಕೊಟ್ಟು ಸಾಯಿಸಿದ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ.
ರಾತ್ರಿ ವೇಳೆ ನಾಯಿಗಳು ಬೊಗಳುತ್ತಿವೆ ಎಂಬ ಕಾರಣಕ್ಕೆ ಅಪಾರ್ಟ್ ಮೆಂಟ್ ಬಳಿ ಬೀಡು ಬಿಟ್ಟಿದ್ದ 10 ಶ್ವಾನಗಳಿಗೆ ದುರುಳರು ವಿಷ ನೀಡಿ ಕೊಂದಿದ್ದಾರೆ.
ಇನ್ನು ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಶ್ವಾನಗಳನ್ನು ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಶ್ವಾನಗಳನ್ನು ಕೊಂದ ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅನಿಮಲ್ ಅಸೋಸಿಯೇಷನ್ ಆಗ್ರಹಿಸಿದೆ.
Laxmi News 24×7