ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ( Shivamogga Airport ) ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು.
ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( BS Yediyurappa ) ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವಂತ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಅವರು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.