Breaking News

ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್

Spread the love

ಹೈದರಾಬಾದ್: ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿರುವ ನಾಥುರಾಮ್ ಗೋಡ್ಸೆ ಅವರ ಸಿದ್ಧಾಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೇರವಾಗಿ ಬೆಂಬಲಿಸುತ್ತಿದ್ದಾರೆ ಎಂದು ತೆಲಂಗಾಣ ರಾಷ್ಟ್ರ ಸಮಿತಿ ಕಾರ್ಯಾಧ್ಯಕ್ಷ ಕೆ.ಟಿ. ರಾಮ್‍ರಾವ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ. ಪ್ರಧಾನಿ ಮೋದಿ ಮೌನವಾಗಿ ಮತ್ತು ನೇರವಾಗಿ ಗೋಡ್ಸೆಯ ಸಿದ್ಧಾಂತವನ್ನು ಪಾಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗುಜರಾತ್ ಶಾಸಕನನ್ನು ಅಸ್ಸಾಂ ಪೊಲೀಸರು ಬಂಧಿಸುವಂತೆ ಮಾಡಿದ ಮೋದಿ ಸರ್ಕಾರಕ್ಕೆ ಧೈರ್ಯವಿದ್ದರೆ ತಮ್ಮನ್ನು ಬಂಧಿಸಲಿ ಎಂದು ಸವಾಲು ಹಾಕಿದರು.

ಸಮಾಜದ ಕೆಲವು ವರ್ಗಗಳು ಬೆದರಿಕೆ ಮತ್ತು ಅಸುರಕ್ಷಿತ ಭಾವನೆಗಳನ್ನು ಅನುಭವಿಸುವ ಹಲವಾರು ಘಟನೆಗಳು ದೇಶಾದ್ಯಂತ ನಡೆಯುತ್ತಿವೆ. ಇದೆಲ್ಲವೂ ಸಂಪೂರ್ಣವಾಗಿ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತಿದ್ದರೂ ಪ್ರಧಾನಿ ಅವರು ಒಂದು ಮಾತನ್ನೂ ಹೇಳುತ್ತಿಲ್ಲ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ