ಬೆಂಗಳೂರು: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಕಳೆದ ಅಗಸ್ಟ್ 25ರಂದು ಡಿಕೆ ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ವೈದ್ಯರ ಸಲಹೆ ಮೇರೆಗೆ ಇನ್ನೂ ಕೆಲ ದಿನಗಳು ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.
ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಬುಧವಾರ ದಾಖಲಾಗಿದ್ದಾರೆ. ಜೊತೆಗೆ ಇನ್ನೂ ಕೆಲವು ದಿನಗಳ ಕಾಲ ತಾವು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದು, ಕಾರ್ಯಕರ್ತರಾಗಲಿ, ಅಭಿಮಾನಿಗಳಾಗಲಿ ಆಸ್ಪತ್ರೆಗಾಗಲಿ ಅಥವಾ ತಮ್ಮ ನಿವಾಸಕ್ಕಾಗಲಿ ಆಗಮಿಸುವುದು ಬೇಡ ಎಂದು ಮನವಿ ಮಾಡಿದ್ದಾರೆ.