Breaking News

ಬೆಳ್ಳಂಬೆಳಗ್ಗೆ ರಾಮನಗರದಲ್ಲಿ ದುರಂತ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ

Spread the love

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ.

ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು.

ಶೀಲ, ಗಾನವಿ, ಸಾನವಿ ಗಂಭೀರ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.

ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲಕಾಲ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಆಗಿತ್ತು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ