ಮೈಸೂರು: ಸಿಎಂ ಆದವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು. ವಿಪಕ್ಷ ನಾಯಕ ಸಿದ್ದರಾಮಯ್ಯ 5 ವರ್ಷ ಯಶಸ್ವಿ ಆಡಳಿತ ನಡೆಸಿದವರು, ಹುಣಸೂರಿನಿಂದ ಸ್ಪರ್ದಿಸಿದರೆ ಅವರನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ಎಂಎಲ್ ಸಿ ಹೆಚ್.ವಿಶ್ವನಾಥ್ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಸಿದ್ದರಾಮಯ್ಯ ಯಶಸ್ವಿಯಾಗಿ ಆಡಳಿತ ನಡೆಸಿದವರು, ಮುಂಬರುವ ಚುನಾವಣೆಗೆ ಸಿದ್ದರಾಮಯ್ಯ ಹುಣಸೂರಿನಿಂದ ಸ್ಪರ್ಧೆ ಮಾಡಿದರೆ ಅವರನ್ನು ಗೆಲ್ಲಿಸುತ್ತೇವೆ. ಅಂತ ಶೆಟ್ರ ಮಂಜನನ್ನೇ ಗೆಲ್ಲಿಸಿದ್ವಿ, ನಿಮ್ಮನ್ನು ಗೆಲ್ಲಿಸಲ್ವಾ? ಎಂದು ಪ್ರಶ್ನಿಸಿದರು.