Breaking News

ಹೊಟ್ಟೆನೋವಿನ ಚಿಕಿತ್ಸೆಗೆ ಹೋದ ದಲಿತ, ಲಂಬಾಣಿ ಹಾಗೂ ಬಡ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶ ತೆಗೆದು ಹಾಕಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು

Spread the love

(ಹಾವೇರಿ ಜಿಲ್ಲೆ): ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರ ಬಳಿ ಹೊಟ್ಟೆನೋವಿನ ಚಿಕಿತ್ಸೆಗೆ ಹೋದ ದಲಿತ, ಲಂಬಾಣಿ ಹಾಗೂ ಬಡ ಮಹಿಳೆಯರಿಗೆ ಅನಧಿಕೃತವಾಗಿ ಗರ್ಭಕೋಶ ತೆಗೆದು ಹಾಕಿದ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ 250ಕ್ಕೂ ಹೆಚ್ಚು ಮಹಿಳೆಯರು ರಾಣೆಬೆನ್ನೂರಿನಿಂದ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸಲು ಸೋಮವಾರ ಪಾದಯಾತ್ರೆ ಆರಂಭಿಸಿದರು.

 

‘2010ರಿಂದ 2017ರವರೆಗೆ ಈ ಪ್ರಕರಣಗಳು ನಡೆದಿದ್ದವು. ಆಗಿನ ಸರ್ಜನ್‌ ಡಾ.ಪಿ.ಶಾಂತ ಅವರು ವಿವಿಧ ಕಾರಣಗಳಿಂದ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳೆಯರ ಗರ್ಭಕೋಶವನ್ನು ತೆಗೆದಿದ್ದರು. ಅದರ ‍ಪರಿಣಾಮದಿಂದ ಮಾನಸಿಕ ಹಾಗೂ ದೈಹಿಕ ನ್ಯೂನತೆಗಳಿಂದ ಬಳಲುತ್ತಿರುವ 1,522 ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವಿಶೇಷ ಆರ್ಥಿಕ ನೆರವು ಬಿಡುಗಡೆಗೊಳಿಸಬೇಕು’ ಎಂದು ಮಹಿಳೆಯರು ಒತ್ತಾಯಿಸಿದರು.

ರೈತ ಸಂಘದ ಅಧ್ಯಕ್ಷ ಶಿವಪುತ್ರಪ್ಪ ಮಲ್ಲಾಡದ ಮಾತನಾಡಿ, ‘ಸಂತ್ರಸ್ತರಿಗೆ ಸರ್ಕಾರವು ₹45.66 ಕೋಟಿ ಪರಿಹಾರ ನೀಡಲು ಮುಂದಾಗಿದ್ದನ್ನು ತಪ್ಪಿಸಿದ ಈಗಿನ ಆಡಳಿತಾಧಿಕಾರಿ ಡಾ.ಪರಮೇಶ್ವರಪ್ಪ ಅವರನ್ನು ಕರ್ತವ್ಯದಿಂದ ವಜಾ ಮಾಡಬೇಕು’ ಎಂದರು.

‘ಪಾದಯಾತ್ರೆಯು ಮೂರು ದಿನ ನಡೆಯಲಿದೆ. ಬುಧವಾರ ಶಿಗ್ಗಾವಿಯಲ್ಲಿ ಮುಖ್ಯಮಂತ್ರಿ ಮನೆ ಎದುರು ನೊಂದ ಮಹಿಳೆಯರ ಬೇಡಿಕೆಗಳು ಈಡೇರುವವರೆಗೂ ಧರಣಿ ನಡೆಸುತ್ತೇವೆ’ ಎಂದು ತಿಳಿಸಿದರು.


Spread the love

About Laxminews 24x7

Check Also

ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ

Spread the loveಸವದತ್ತಿ; ದಾನವೀರ ಶರಣ ಸಿರಸಂಗಿ ಲಿಂಗರಾಜ ದೇಸಾಯಿ ಅವರ 165ನೇ ವರ್ಷದ ಜಯಂತ್ಯೋತ್ಸವ ಆಚರಣೆ ಧಾರವಾಡದ ಮುರುಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ