Breaking News

ಪಿಎಸ್‌ಐ ಕೇಸ್ – ಮತ್ತೊಬ್ಬ ಆರೋಪಿ ಅರೆಸ್ಟ್, 40 ಲಕ್ಷ ಡೀಲಿಂಗ್?

Spread the love

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿರುವ ಬಗ್ಗೆ ದಿನೇ ದಿನೇ ರೋಚಕ ಸಂಗತಿ ಹೊರಬರುತ್ತಿದೆ. ಮಂಗಳವಾರ ಸಿಐಡಿ ತಂಡ ಪಿಎಸ್‌ಐ ಅಕ್ರಮಕ್ಕೆ ಸಂಬಂಧಪಟ್ಟ ಆರೋಪಿ ಎನ್ ಸುನೀಲ್ ಕುಮಾರ್‌ನನ್ನು ಬಂಧಿಸಿದ್ದಾರೆ.

ಒಟ್ಟಾರೆಯಾಗಿ ಪಿಎಸ್‌ಐ ನೇಮಕಾತಿ ಅಕ್ರಮದ ಜಾಡನ್ನು ಬೆನ್ನು ಹಿಡಿದ ಸಿಬಿಐ ತಂಡ ಇಲ್ಲಿಯವರೆಗೆ 16 ಆರೋಪಿಗಳನ್ನು ಬಂಧಿಸಿದ್ದಾರೆ.

ಕಲಬುರಗಿ ನಿವಾಸಿಯಾಗಿರುವ ಸುನೀಲ್ ಕುಮಾರ್ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಕೇಂದ್ರ ಸ್ಥಾನವಾದ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆ ಬರೆದಿದ್ದಾರೆ ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣ ಬಳಸಿ, ಉತ್ತೀರ್ಣನಾಗಿರುವ ಆರೋಪ ಸುನೀಲ್ ಮೇಲಿದೆ. ಹಗರಣದಲ್ಲಿ ದೊಡ್ಡ ಪಾತ್ರ ವಹಿಸಿದ ರುದ್ರಗೌಡ ಡಿ ಪಾಟೀಲ್ ಮುಖಾಂತರವೇ ಸುನೀಲ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ