ನವದೆಹಲಿ: ಕೋವಿಡ್ ಪ್ರಕರಣಗಳು ( Covid-19 cases ) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಮಹತ್ವದ ಕೊರೋನಾ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ.
ಈ ಬಗ್ಗೆ ಪ್ರಧಾನಿ ಕಚೇರಿ ಮೂಲಗಳಿಂದ ಖಚಿತ ಮಾಹಿತಿ ನೀಡಿದ್ದು, ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಚರ್ಚಿಸಲಿದ್ದಾರೆ ಎಂದು ಹೇಳಿದೆ.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸಹ ಭಾಗಿಯಾಗಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಂದಿನ ಸಭೆಯಲ್ಲಿ ಪ್ರಧಾನಿ ಮೋದಿ ಸಿಎಂಗಳಿಗೆ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆಸಲಹೆ ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.