Breaking News

ಎನ್‍ಡಿಪಿಎಸ್ ಆಕ್ಟ್ ಸೆಕ್ಷನ್ 21, 21ಸಿ, 27ಬಿ, 27ಎ, 29, ಐಪಿಸಿ 120ಬಿ ಅಡಿ ಎಫ್‍ಐಆರ್ ದಾಖಲಾಗಿದೆ

Spread the love

ಬೆಂಗಳೂರು: ಎರಡು ಬಾರಿ ಎಂಡಿಎಂಎ (ಮೀಥೈಲ್ ಎನೆಡಿಯಾಕ್ಸಿ ಮೆಥಾಂಫೆಟಮೈನ್ ನನ್ನು ಎಕ್‍ಸಸ್ಟಿ ಮಾತ್ರೆ ಎಂದು ಕರೆಯಲಾಗುತ್ತದೆ) ಡ್ರಗ್ ತೆಗೆದುಕೊಂಡಿರೋದಾಗಿ ನಟಿ ರಾಗಿಣಿ ದ್ವಿವೇದಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ

ಗೆಳೆಯ ರವಿಶಂಕರ್ ತಂದುಕೊಟ್ಟಿದ್ದ ಎಂಡಿಎಂಎ ಡ್ರಗ್ ಮನೆಯಲ್ಲಿಯೇ ಬಳಕೆ ಮಾಡಿದ್ದೇನೆ ಎಂದು ರಾಗಿಣಿ ಹೇಳಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ಬಾರಿಯೂ ರವಿಶಂಕರ್ ಡ್ರಗ್ಸ್ ತಂದಿದ್ದನು. ಇತ್ತ ರಾಗಿಣಿ, ರವಿಶಂಕರ್ ಮತ್ತು ರಾಹುಲ್ ಬಳಸುತ್ತಿದ್ದ ಮೊಬೈಲ್ ಮಾಹಿತಿಯನ್ನ ಪುನಃ ಕಲೆ ಹಾಕಲಾಗಿದೆ. ಎಫ್‍ಎಸ್‍ಎಲ್ ವರದಿ ಸಿಸಿಬಿ ಪೊಲೀಸರ ಕೈಗೆ ಸೇರಿದೆ.ರಾಗಿಣಿ ಮದ್ಯದ ಜೊತೆ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಸಿಸಿಬಿ ವಿಚಾರಣೆ ರವಿಶಂಕರ್ ಹೇಳಿಕೆ ಆಧರಿಸಿ ನಟಿಯನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರಕರಣ ಸಂಬಂಧ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಆಕ್ಟ್ ಸೆಕ್ಷನ್ 21, 21ಸಿ, 27ಬಿ, 27ಎ, 29, ಐಪಿಸಿ 120ಬಿ ಅಡಿ ಎಫ್‍ಐಆರ್ ದಾಖಲಾಗಿದೆ. ಪ್ರಕರಣದಲ್ಲಿ 12 ಜನರನ್ನು ಆರೋಪಿಗಳ ಹೆಸರು ಉಲ್ಲೇಖವಾಗಿದೆ. ರಾಗಿಣಿ ದ್ವಿವೇದಿ ಎರಡನೇ ಆರೋಪಿಯ ಸ್ಥಾನದಲ್ಲಿದ್ದಾರೆ


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ