Breaking News

BJP ಸೇರಲು ಮುಂದಾದ ಸಂಸದೆ ಸುಮಲತಾ; ಮದ್ದೂರಿನಿಂದ ಅಭಿಷೇಕ್ ಅಂಬರೀಶ್ ಅಖಾಡಕ್ಕಿಳಿಸಲು ಪ್ಲಾನ್..?

Spread the love

ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಅವರನ್ನು ಅಖಾಡಕ್ಕೆ ಇಳಿಸಲು ಪ್ಲಾನ್ ಮಾಡಿರುವ ಸುಮಲತಾ, ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.

 

ಈಗಾಗಲೇ ಕಾಂಗ್ರೆಸ್, ಮದ್ದೂರಿನಿಂದ ಎಸ್.ಎಂ. ಕೃಷ್ಣ ಸಹೋದರನ ಮಗನಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಗುರುಚರಣ್ ಗೆ ಟಿಕೆಟ್ ನೀಡುವುದಾಗಿ ಡಿ.ಕೆ. ಶಿವಕುಮಾರ್ ಕೂಡ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಬಿಜೆಪಿಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಈಗಾಗಲೇ ಸುಮಲತಾ, ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿದ್ದು, ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

Spread the loveಹಾವೇರಿ: ನೌಕಾಪಡೆಯ ಯೋಧ  ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ  ಜಿಲ್ಲೆಯ ಹಾನಗಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ