Breaking News

ಮಾಜಿ ಸಚಿವ, ದಿ.ಜೀವರಾಜ್‌ ಪುತ್ರ ಆದಿತ್ಯ ಆಳ್ವಾ ಸೇರಿದಂತೆ 12 ಮಂದಿ ವಿರುದ್ಧ ಎಫ್‌ಐಆರ್‌

Spread the love

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ರಾಗಿಣಿ ಜೊತೆ ಮಾಜಿ ಸಚಿವ, ದಿ. ಜೀವರಾಜ್‌ ಪುತ್ರ ಆದಿತ್ಯ ಆಳ್ವಾ ಸೇರಿದಂತೆ 12 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಸಿಸಿಬಿಯ ನಾರ್ಕೊಟಿಕ್ಸ್ ಎಸಿಪಿ ಗೌತಮ್ ನೀಡಿದ ಸ್ವಯಂಪ್ರೇರಿತ ದೂರಿನ ಆಧಾರದ ಮೇಲೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಾಗಿತ್ತು. ಬಂಧಿತ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷಿ ಹಾಗೂ ಪುರಾವೆಗಳು ಸಿಕ್ಕಿರುವ ಹಿನ್ನೆಯಲ್ಲಿ ಗೌತಮ್‌ ಅವರು ದೂರು ನೀಡಿದ್ದರು. ವಾಟ್ಸಾಪ್ ಮೆಸೇಜ್‍ಗಳು ಹಾಗೂ ಪೆಡ್ಲರ್ ಗಳ ನೀಡಿರುವ ಮಾಹಿತಿ ಅನ್ವಯ ನಟಿ ರಾಗಿಣಿ ಅವರ ಕೈವಾಡದ ಬಗ್ಗೆ ಸಾಕ್ಷಿ ಲಭ್ಯವಾಗಿದ್ದು, ಡ್ರಗ್ ಡೀಲರ್ ಗಳ ಜೊತೆ ಒಡನಾಟವನ್ನು ಹೊಂದಿದ್ದಾರೆ. ಅನೇಕ ಬಾರಿ ಡ್ರಗ್ ಡೀಲ್ ಮಾಡಿರುವ ಬಗ್ಗೆ ಮಾಹಿತಿ ಖಚಿತವಾದ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

12 ಮಂದಿ ಆರೋಪಿಗಳು ಯಾರು?
ಶಿವಪ್ರಕಾಶ್ ಮೊದಲ ಆರೋಪಿ ಆಗಿದ್ದರೆ ರಾಗಿಣಿ ಎರಡನೇ ಆರೋಪಿಯಾಗಿದ್ದಾರೆ. ಪಾರ್ಟಿ ಆಯೋಜಿಸುತ್ತಿದ್ದ ವಿರೇನ್ ಖನ್ನಾ ಎ3, ಪ್ರಶಾಂತ್ ರಂಕಾ ಎ4, ವೈಭವ್ ಜೈನ್ ಎ5, ಆದಿತ್ಯ ಆಳ್ವಾ ಎ6, ಲೂಮ್ ಪೆಪ್ಪರ್ ಎ7, ಪ್ರಶಾಂತ್ ರಿಜು ಎ8, ಅಶ್ವಿನ್ ಎ9, ಅಭಿ ಸ್ವಾಮಿ ಎ10, ರಾಹುಲ್ ಎ11, ವಿನಯ್ ಎ12 ಆರೋಪಿಗಳಾಗಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ