Breaking News

ಸಿಎಂ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನಕ್ಕೆ ಪೈಲೆಟ್‌ ಗೈರು!

Spread the love

ಬೆಂಗಳೂರು: ಪೈಲೆಟ್‌ ಅನುಪಸ್ಥಿತಿಯಿಂದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಗಳೂರು ಪ್ರವಾಸವನ್ನು ರದ್ದುಗೊಳಿಸಿದ ಬೆಳವಣಿಗೆ ಬುಧವಾರ ನಡೆದಿದೆ. ಇದನ್ನು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. “ಮಧ್ಯಾಹ್ನ ಮಂಗಳೂರಿಗೆ ತೆರಳಬೇಕಿತ್ತು.

ಆದರೆ, ಪೈಲೆಟ್‌ ಒಬ್ಬರು ಬಾರದ ಕಾರಣ ವಿಮಾನ ಮೇಲೇರಲಿಲ್ಲ’ ಎಂದು ಮೂಡುಬಿದಿರೆ ಕಾರ್ಯಕ್ರಮದಲ್ಲಿ ಸಿಎಂ ಹೇಳಿದರು.

ಆದರೆ ಅಧಿಕಾರಿಗಳ ಮೂಲದ ಪ್ರಕಾರ ತಾಂತ್ರಿಕ ಸಮಸ್ಯೆ ಉಂಟಾಗಿದ್ದರಿಂದ ವಿಮಾನ ಮೇಲೇರದೆ ಸಿಎಂ ನಂತರ ಪ್ರತ್ಯೇಕ ಹೆಲಿಕ್ಯಾಪ್ಟರ್‌ ಮೂಲಕ ಮೂಡುಬಿದಿರೆಗೆ ತೆರಳುವಂತಾಯಿತು ಎನ್ನಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ