Breaking News

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

Spread the love

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಎಂದು ಹೇಳಿದ್ದರು.

ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ನೋಡೋಣ. ನಾವು ನಮ್ಮ ಆರ್ಥಿಕತೆಯನ್ನು ಗಮನಿಸಬೇಕು. ಅದರ ಆಧಾರದ ಮೇಲೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತು ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ