Breaking News

ಡೀಲಿಂಗ್ ಸರ್ಕಾರದಲ್ಲಿ ದುಡ್ಡಿದ್ದವನಿಗೆ ಉದ್ಯೋಗ ಎಂದ ಮೇಲೆ ಬಡವರು ಪರೀಕ್ಷೆ ಬರೀಬೇಕು ಯಾಕೆ – ಕಾಂಗ್ರೆಸ್ ಪ್ರಶ್ನೆ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅರ್ಹತಾ ಪರೀಕ್ಷೆಯ ಮೂಲಕ ಸರ್ಕಾರಿ ಉದ್ಯೋಗ ಭರ್ತಿ ಮಾಡುವುದೇಕೆ? ಈ ಸರ್ಕಾರದಲ್ಲಿ ದುಡ್ಡಿದ್ದವನಿಗೆ ಉದ್ಯೋಗ ಎಂದ ಮೇಲೆ ಬಡವರು ಯಾಕೆ ಪರೀಕ್ಷೆ ಬರೆಯಬೇಕು ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಪ್ರಶ್ನೆ ಮಾಡಿದೆ.

ಟ್ವೀಟ್‍ನಲ್ಲಿ ಏನಿದೆ?
ರಾಜ್ಯದ ಬೊಮ್ಮಾಯಿ ನೇತೃತ್ವದ ಸರ್ಕಾರ ಡಬಲ್ ಇಂಜೀನ್ ಸರ್ಕಾರವಲ್ಲ. ಇದು ಡೀಲಿಂಗ್ ಸರ್ಕಾರ. ಈ ಸರ್ಕಾರದಲ್ಲಿ ಪ್ರತಿ ಸರ್ಕಾರಿ ಉದ್ಯೋಗಕ್ಕೂ ಇಂತಿಷ್ಟು ರೇಟ್ ಎಂದು ಫಿಕ್ಸ್ ಆಗಿದೆ. PSI ನೇಮಕಾತಿಯಲ್ಲಿ ಡೀಲಿಂಗ್, ಪ್ರಾಧ್ಯಾಪಕರ ನೇಮಕಾತಿಯಲ್ಲಿ ಡೀಲಿಂಗ್, ಎಂಜಿನಿಯರ್‌ಗಳ ನೇಮಕಾತಿಯಲ್ಲೂ ಡೀಲಿಂಗ್. ಇದು ಡೀಲಿಂಗ್ ಸರ್ಕಾರವಲ್ಲದೆ ಮತ್ತೇನು?. ವಿಧಾನಸೌಧವನ್ನೇ ಡೀಲಿಂಗ್ ಸೆಂಟರ್ ಮಾಡಿಕೊಂಡಿರುವಾಗ ಎಲ್ಲಾ ನೇಮಕಾತಿಯನ್ನು ಹರಾಜು ಪ್ರಕ್ರಿಯೆಯ ಮೂಲಕವೇ ನಡೆಸಲಿ. ಬಡವರು ಪರೀಕ್ಷೆ ಬರೆದು ಸಮಯ-ಹಣ ಯಾಕೆ ವ್ಯರ್ಥ ಮಾಡಬೇಕು?.

ಡೀಲಿಂಗ್ ದಂಧೆಯಲ್ಲಿ ಮುಳುಗಿರುವ ರಾಜ್ಯ ಬಿಜೆಪಿ ಸರ್ಕಾರ ಇತಿಹಾಸ ಕಂಡ ಅತ್ಯಂತ ಕಡುಭ್ರಷ್ಟ ಸರ್ಕಾರ. ಸರ್ಕಾರಿ ಉದ್ಯೋಗಕ್ಕೆ ರೇಟ್ ಫಿಕ್ಸ್ ಮಾಡಿ ದಂಧೆ ನಡೆಸುವ ಈ ಸರ್ಕಾರಕ್ಕೆ ಮಾನ ಮಾರ್ಯಾದೆಯೇನಾದರೂ ಇದೆಯೇ? ಭ್ರಷ್ಟಾಚಾರವನ್ನು ಹಾಸು ಹೊದ್ದು ಮಲಗಿರುವ ಈ ಸರ್ಕಾರಕ್ಕೆ ಜನರ ಎದುರು ಮುಖ ತೋರಿಸಲು ನಾಚಿಕೆಯಾಗುವುದಿಲ್ಲವೆ?.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ