ಮೈಸೂರು/ಚಿಕ್ಕಮಗಳೂರು/ ವಿಜಯಪುರ: ಹಿದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ.
ಸುದೀಪ್, ಅಜಯ್ ದೇವಗನ್ ಮಧ್ಯೆ ಹಿಂದಿವಾರ್ ಸಂಬಂಧ ಪ್ರತಿಕ್ರಿಯಿಸಿದ ಅವರು, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ ಎಂದರು.ಹೆಚ್ಚು ಭಾಷೆ ಕಲಿಯೋದ್ರಿಂದ ನಾವು ಶ್ರೀಮಂತರಾಗುತ್ತೇವೆ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ. ಆ ಬಳಿಕ ಬೇರೆ ಬೇರೆ ಭಾಷೆಗಳಿಗನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರೋದ್ರಿಂದ ಕನ್ನಡವನ್ನ ಪ್ರೀತಿಸುತ್ತೇನೆ. ಇತರ ಭಾಷಣಗಳನ್ನೂ ಪ್ರೀತಿಸ್ತೀನಿ ಎಂದು ನಿರಾಣಿ ತಿಳಿಸಿದರು.
Laxmi News 24×7