Breaking News

ಸುಮಲತಾರನ್ನ ಬಿಜೆಪಿ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ: ಸಿ.ಪಿ ಯೋಗೇಶ್ವರ್

Spread the love

ರಾಮನಗರ: ಮಂಡ್ಯ ಸಂಸದೆ ಸುಮಲತಾರನ್ನ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಮ್ಮ ಪಕ್ಷ ಅವರಿಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆ ನಮ್ಮ ಪಕ್ಷಕ್ಕೆ ಬನ್ನಿ ಎಂದು ಆಹ್ವಾನ ಮಾಡಿದ್ದೇವೆ. ಮದುವೆ ಸಮಾರಂಭದಲ್ಲಿ ಅವರನ್ನ ಭೇಟಿ ಮಾಡಿದ್ದೆವು, ಸಿಎಂ ಸಹ ಇದ್ದರು. ಅವರು ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮುಂದೆ ನೋಡೋಣ ಎಂದರು.

ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಬಿಜೆಪಿಯಿಂದ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಮಲತಾ ಇನ್ನೂ ಪಕ್ಷಕ್ಕೆ ಬಂದಿಲ್ಲ. ಹೀಗಾಗಿ ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ. ಮಂಡ್ಯದ ಮಾಜಿ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ ಅವರನ್ನು ಸಹ ಆಹ್ವಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಾಗಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಮುಂದಿನ ತಿಂಗಳಿನಿಂದ ಈ ಕಾರ್ಯಕ್ರಮ ಪ್ರಾರಂಭ ಆಗಲಿದೆ. ನಾನು ಆಪರೇಷನ್ ಎಕ್ಸ್‍ಪರ್ಟ್ ಅಲ್ಲ, ಆದರೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಈ ಭಾಗದ ಮುಖಂಡನಾಗಿದ್ದೇನೆ, ಹಾಗಾಗಿ ನನಗೆ ಜವಾಬ್ದಾರಿ ಇದೆ. ಸಚಿವ ಸ್ಥಾನದ ಬಗ್ಗೆ ಗೊತ್ತಿಲ್ಲ, ಸಿಎಂಗೆ ಕೇಳಿ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ