Breaking News

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಗುಡ್ ನ್ಯೂಸ್: 6.5 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ನಿಂದ ಹೊರಗೆ

Spread the love

ಮಂಗಳೂರು: ಡೀಮ್ಡ್ ಫಾರೆಸ್ಟ್ ನಿಯಮ ಸರಳಗೊಳಿಸಿ ರಾಜ್ಯದ ರೈತರ ಆತಂಕ ದೂರ ಮಾಡಲು ಸರ್ಕಾರ ಕ್ರಮಕೈಗೊಂಡಿದೆ.

ಮೂಡಬಿದರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 6.5 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ರೈತರಿಗೆ ಅನೇಕ ವರ್ಷಗಳಿಂದ ಡೀಮ್ಡ್ ಫಾರೆಸ್ಟ್ ನಿಯಮದಿಂದ ಆತಂಕ ಉಂಟಾಗಿತ್ತು.

ಇದನ್ನು ಕೈಬಿಡಬೇಕೆಂದು ರೈತರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಇದರ ಅನ್ವಯ 6.5 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಲು ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ