ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸಿದ್ದರಾಮಯ್ಯ ಹೇಳಿದಂತೆ ನಡೆಯುತ್ತಿದೆ. ಹಾಗಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಒಂದು ಕಡೆ ಕೆಪಿಸಿಸಿ ಅಧ್ಯಕ್ಷರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ.
ಮತ್ತೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ʼಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆʼ ಎಂದು ಹೇಳಿಸುತ್ತಿದ್ದಾರೆ. ಬುರುಡೆ ರಾಮಯ್ಯ ಅವರೇ, ಜಾಣ ಮೌನದ ಮೂಲಕ ಡಿಕೆ ಶಿವಕುಮಾರ್ ಅವರಿಗೆ ಟಕ್ಕರ್ ನೀಡುತ್ತಿದ್ದೀರಾ ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ನಾಯಕ ರಾಜಣ್ಣ ಅವರು, ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂದಿದ್ದಾರೆ. ಮೇ ತಿಂಗಳಲ್ಲಿ ರಾಜಸ್ಥಾನದಲ್ಲಿ ನಡೆಯುವ ಚಿಂತನ ಶಿಬಿರದಲ್ಲೂ ಸಿದ್ದರಾಮಯ್ಯ ಅವರ ಹೆಸರೇ ಇದೆ, ಅಲ್ಲದೆ ಕೆಲ ಶಾಸಕರು ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹಾಗಾದರೆ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ಬಿಜೆಪಿ ಕಾಲೆಳೆದಿದೆ.