Breaking News

ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಹೈಡ್ರಾಮಾ ಮಾಡಿದ ಆರೋಪಿಗಳು

Spread the love

ಬೆಂಗಳೂರು: ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿಲುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ.

 

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಜೈಲಿನಲ್ಲಿ ಇರಿಸಲಾಗಿದ್ದು, ಈ ಪೈಕಿ ಐವರು ಆರೋಪಿಗಳನ್ನು ಎನ್‌ಐಎ ಪೊಲೀಸರ ವಶಕ್ಕೆ ನೀಡಿ ನಗರದ ಎನ್‌ಐಎ ವಿಶೇಷ ನ್ಯಾಯಾಲಯ ಮಂಗಳವಾರ (ಏ.26) ಆದೇಶಿಸಿತ್ತು.

ಇದರನ್ವಯ ಎನ್‌ಐಎ ಅಧಿಕಾರಿಗಳು, ಆರೋಪಿಗಳನ್ನು ವಶಕ್ಕೆ ಪಡೆಯಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾಗ ಆರೋಪಿಗಳು ಸುತಾರಾಂ ನಿರಾಕರಿಸಿದ್ದಾಗಿ ಮೂಲಗಳು ತಿಳಿಸಿವೆ. ರಂಜಾನ್ ಮುಗಿಯುವವರೆಗೆ ಎನ್‌ಐಎ ವಶಕ್ಕೆ ನೀಡಬಾರದು ಎಂದು ಒತ್ತಾಯಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಅಧಿಕಾರಿಗಳು ಮಧ್ಯಪ್ರವೇಶಿಸಿದ್ದು, ವೈದ್ಯಕೀಯ ತಪಾಸಣೆಯ ನಂತರ ಐವರು ಆರೋಪಿಗಳನ್ನು ಎನ್‌ಐಎ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಇನ್ನು ಕೆಲವೇ ದಿನಗಳಲ್ಲಿ ಇನ್ನೂ ಐವರು ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದುಕೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

Spread the love ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ