Breaking News

ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ!

Spread the love

ಪಟನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಠಾಣೆಯಲ್ಲೇ ಮಸಾಜ್​ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ವೈರಲ್​ ಆಗಿದ್ದು, ಸಧ್ಯ ಅಧಿಕಾರಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

 

ಹೌದು, ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯ ಬಳಿ ಠಾಣೆಯ ಒಳಗಡೆ ಮಸಾಜ್​ ಮಾಡಿಸಿಕೊಂಡು ಹಿರಿಯ ಅಧಿಕಾರಿ ದರ್ಪ ಮೆರೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಏನಿದೆ?

ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಹೊರಠಾಣೆಯ ಹಿರಿಯ ಅಧಿಕಾರಿ ಶಶಿಭೂಷಣ ಸಿನ್ಹಾ ಎಂಬುವರು ತಮ್ಮ ಮೇಲಿನ ಅಂಗಿಯನ್ನು ಬಿಚ್ಚಿ ಮಹಿಳೆಯ ಬಳಿ ಮಸಾಜ್​ ಮಾಡಿಸಿಕೊಳ್ಳುತ್ತಾ ಫೋನ್​ ನಲ್ಲಿ ಮಾತನಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಇದರ ಜತೆಗೆ ಅಧಿಕಾರಿ ಕೇಸ್​ ಗೆ ಸಂಬಂಧ ಫೋನ್​ ನಲ್ಲಿ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಬೆನ್ನಲ್ಲೇ ಸಹರ್ಸಾ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಲಿಪಿ ಸಿಂಗ್​ ಅವರು, ಅಧಿಕಾರಿ ಶಶಿಭೂಷಣ ಸಿನ್ಹಾ ಅವರನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ