Breaking News

ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ACB ದಾಳಿ: 10 ಲಕ್ಷ ರೂ ಹಣ ವಶ

Spread the love

ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ನಿನ್ನೆ ಸಂಜೆ ರಾಜಾಜಿನಗರದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಎಂಡಿ ಲೀಲಾವತಿ ಮತ್ತು ಜಿಎಂ ನಾಗರಾಜಪ್ಪ ಮನೆ ಮೇಲೆ ಎಸಿಬಿ ಅಧಿಕಾರಿ ಗಳು ದಾಳಿ‌ ನಡೆಸಿ ಕಡತಗಳ ಪರಿಶೀಲನೆ ಕೈಗೊಂಡಿದ್ದರು.

ಭೋವಿ ಅಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಸಂಬಂಧ ಸಾರ್ವಜನಿ ಕರಿಂದ ದೂರುಗಳು ಕೇಳಿ ಬಂದಿದ್ದವು. ಪ್ರಾಥಮಿಕ ತನಿಖೆಯಲ್ಲಿ ಉದ್ಯಮ ಶೀಲತೆ ಯೋಜನೆ, ಐರಾವತ ಯೋಜನೆ, ಗಂಗಾಕಲ್ಯಾಣ, ಭೂ ಒಡೆತನ,

ಸಮೃದ್ಧಿ, ನೇರ ಸಾಲ ಹಾಗೂ ಇತರ ಯೋಜನೆಗಳಲ್ಲಿ ಅವ್ಯವಹಾರ ಬೆಳಕಿಗೆ ಬಂದಿತ್ತು. ಹೀಗಾಗಿ ಎಂ.ಡಿ ಲೀಲಾವತಿ ಹಾಗೂ ಜಿ.ಎಂ ನಾಗರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಬೆಂಗಳೂರು ನಗರ ಎಸಿಬಿ ಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆ ಭೋವಿ ಅಭಿವೃದ್ಧಿ ಪ್ರಾಧಿಕಾರದ ಎಂ.ಡಿ ಲೀಲಾವತಿ ಹಾಗೂ ನಾಗರಾಜ್​ರ ಕಚೇರಿ ಹಾಗೂ ಮನೆಗಳ ಮೇಲೆ‌ ದಾಳಿ ಮಾಡಲಾಗಿತ್ತು. ಈ ವೇಳೆ, 10 ಲಕ್ಷ ರೂ ಹಣ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..


Spread the love

About Laxminews 24x7

Check Also

ಗದಗ-ಯಲವಿಗಿ ರೈಲ್ವೆ ಯೋಜನೆ ಶೀಘ್ರ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಮನವಿ

Spread the loveನವದೆಹಲಿ: ಗದಗ ಯಲವಿಗಿ ರೈಲು ಯೋಜನೆ ಡಿಪಿಆರ್‌ಗೆ ಒಪ್ಪಿಗೆ ನೀಡಿ ತ್ವರಿತಗತಿಯಲ್ಲಿ ಆರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ