Breaking News

ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ, ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ –

Spread the love

ಕಲಬುರಗಿ: ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ದಿವ್ಯಾ ಹಾಗರಗಿ ಕಳೆದ ರಾತ್ರಿ ಮಹಿಳಾ ನಿಲಯದಲ್ಲಿಯೇ ಕಾಲ ಕಳೆದಿದ್ದಾರೆ

ಸದಾ ಎಸಿ ಕೋಣೆಯಲ್ಲಿ ಮಲಗುತ್ತಿದ್ದ ದಿವ್ಯಾ ಹಾಗರಗಿ ನಿನ್ನೆ ತಡರಾತ್ರಿವರಗೆ ಫ್ಯಾನ್ ಕೆಳಗೆ ನಿದ್ರೆ ಬರದೆ ಪರದಾಡಿದ್ದಾರೆ. 


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ