Breaking News

ಕೋವಿಡ್-19 ದಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಆಗುತ್ತಿಲ್ಲ.: ಅನಿಲ ಬೆನಕೆ

Spread the love

ಬೆಳಗಾವಿ:  ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಪಾಠವನ್ನಷ್ಟೇ ಮಾಡದೇ ಕೋವಿಡ್-19 ಸಂಕಷ್ಟ ಕಾಲದಲ್ಲಿಯೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಶಾಸಕ ಅನಿಲ ಬೆನಕೆ ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ  ನಗರ ಸಂತ ಅಂಥೋನಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ದಿಂದ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲು ಆಗುತ್ತಿಲ್ಲ. ಶಿಕ್ಷಕರಾಗಿ ನೀವು ವಿದ್ಯಾರ್ಥಿಗಳಿಗೆ ಪಾಠ ಅಷ್ಟೇ ಮಾಡದೇ ಕೊರೊ‌ನಾ ಸಂರ್ಭದಲ್ಲೂ ಕೂಡಾ ಮುಂದೆ ಬಂದು ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ ಮಾತನಾಡಿ, ಶಿಕ್ಷಕರು ಪ್ರತಿಯೊಬ್ಬರ ಜೀವನದಲ್ಲಿ ಸಾಮಾಜಿಕ ಜ್ಞಾನವನ್ನು ತುಂಬುತ್ತಾರೆ. ನಮ್ಮ ದೇಶದ ಭವಿಷ್ಯ ಶಿಕ್ಷಕರು;  ಶಿಕ್ಷಕರಿಂದ ನಾವು ಎಲ್ಲಾ ರಂಗದಲ್ಲೂ ಮುಂದೆ ಸಾಗುತ್ತಿದ್ದೇವೆ ಎಂದರು.

ನಿವೃತ್ತ ಶಿಕ್ಷಕರು, ವಿಶೇಷ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಎಮ್.ಜಿ ಹಿರೇಮಠ,ಜಿಲ್ಲಾ ಪಂಚಾಯತ  ಸಿಇಒ ದರ್ಶನ ಎಚ್.ವ್ಹಿ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

Spread the loveಬೆಳಗಾವಿ : ಟಿಳಕವಾಡಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಮಾ.13ರಿಂದ 15ರವರೆಗೆ 16ನೇ ಸರಣಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ