Breaking News

ಜೆಡಿಎಸ್ ಶಾಸಕ ಸಾರಾ ಮಹೇಶ್ ಮೇಲೆ ಎಫ್ ಐಆರ್ ದಾಖಲು ಆರೋಪ : ರಾತ್ರೋರಾತ್ರಿ ಠಾಣೆ ಎದುರು ಧರಣಿ

Spread the love

ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮೇಲೆ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯ ಸ್ವತಃ ಶಾಸಕ ಸಾ.ರಾ.ಮಹೇಶ್ ಅವರೇ ಠಾಣೆಗೆ ಆಗಮಿಸಿ ತಮ್ಮನ್ನು ಬಂಧಿಸುವಂತೆ ಪ್ರತಿಭಟಿಸುತ್ತಿರುವ ಘಟನೆ ನಡೆಯುತ್ತಿದೆ.

 

ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ನೀಡಿದ ದೂರಿನ ಮೇರೆಗೆ ಶಾಸಕ ಸಾ.ರಾ.ಮಹೇಶ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸಾ.ರಾ.ಮಹೇಶ್ ಸ್ವತಃ ಠಾಣೆಗೆ ಆಗಮಿಸಿದ್ದು, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡರ ಜತೆಗೂಡಿ ತಮ್ಮನ್ನೂ ಬಂಧಿಸುವಂತೆ ಧರಣಿ ನಡೆಸಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾರಾ ಮಹೇಶ್ ಬೆಂಬಲಿಗರು ಪೊಲೀಸರ ನಡೆಯನ್ನು ಖಂಡಿಸಿ ರಾತ್ರೋರಾತ್ರಿ ಧರಣಿ ನಡೆಸಲಾರಂಭಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ಸಹ ಆಗಮಿಸಿದ್ದು, ಯಾವ ಉದ್ದೇಶಕ್ಕೆ ಎಫ್ ಐಆರ್ ದಾಖಲಾಗಿದೆ. ಯಾವ ಪ್ರಕರಣ ದಾಖಲಾಗಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆದರೆ, ರಾತ್ರೋರಾತ್ರಿ ಶಾಸಕರ ಏಕಾಎಕಿ ಧರಣಿಗೆ ಪೊಲೀಸರು ತಬ್ಬಿಬ್ಬಾಗಿದ್ದು ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ