Breaking News

ಈ ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ‘ರಾಕಿಂಗ್ ಸ್ಟಾರ್’ ಯಶ್

Spread the love

ರಾಕಿಂಗ್ ಸ್ಟಾರ್ ಯಶ್ ಚಿತ್ರರಂಗದಲ್ಲಿ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಾಗಿಯೂ ಅಪಾರ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಬರಗಾಲ ಬಂದ ಸಂದರ್ಭದಲ್ಲಿ ಬರಪೀಡಿತ ಪ್ರದೇಶಗಳಿಗೆ ನೀರು ಪೂರೈಕೆ ಮಾಡಿದ್ದ ಯಶ್ ಅವರು ಆ ಬಳಿಕವೂ ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರಿಸಿದ್ದಾರೆ.

ನೆರವು ಬೇಡಿ ಬಂದವರಿಗೆ ಎಂದಿಗೂ ಸಹಾಯ ಹಸ್ತ ಚಾಚುವ ರಾಕಿಂಗ್ ಸ್ಟಾರ್ ಯಶ್, ಈಗ ಮತ್ತೊಂದು ಕಾರಣಕ್ಕೆ ಮತ್ತೊಮ್ಮೆ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರ ‘ಕೆಜಿಎಫ್ ಚಾಪ್ಟರ್ 2’ ಚಿತ್ರ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಬರೆದಿದ್ದು, ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿದ ಚಿತ್ರಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಹಿಂದೆ ದಂಗಲ್ ಹಾಗೂ ಬಾಹುಬಲಿ ಚಿತ್ರಗಳು ಈ ಸಾಧನೆ ಮಾಡಿದ್ದು, ಇದೀಗ ಕೆಜಿಎಫ್ ಚಾಪ್ಟರ್ 2 ಸಾಲಿಗೆ ಸೇರಿದೆ. ಕೇವಲ 16 ದಿನಗಳಲ್ಲಿ ಈ ಚಿತ್ರ ಸಾವಿರ ಕೋಟಿ ರೂಪಾಯಿ ಗಳಿಸಿದ್ದು, ಮುಂದಿನ ದಿನಗಳಲ್ಲಿ ದಂಗಲ್ ಹಾಗೂ ಬಾಹುಬಲಿ ದಾಖಲೆಯನ್ನು ಮುರಿದು ಮೊದಲ ಸ್ಥಾನಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಈ ಚಿತ್ರದ ಮೂಲಕ ರಾಕಿಂಗ್ ಸ್ಟಾರ್ ಯಶ್ ಭಾರತೀಯ ಚಿತ್ರರಂಗದಲ್ಲಿ ಮನೆಮಾತಾಗಿದ್ದು, ಅವರ ಜನಪ್ರಿಯತೆ ಈಗ ಭಾರತದಾದ್ಯಂತ ವ್ಯಾಪಿಸಿದೆ. ಇದರಿಂದಾಗಿ ಸಹಜವಾಗಿಯೇ ಜಾಹೀರಾತು ಸಂಸ್ಥೆಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಇದೇ ರೀತಿ ಪಾನ್ ಮಸಾಲಾ ಕಂಪನಿಯೊಂದು ತಮ್ಮ ಉತ್ಪನ್ನದ ಜಾಹೀರಾತಿಗಾಗಿ ಯಶ್ ಅವರಿಗೆ ಬಹುದೊಡ್ಡ ಮೊತ್ತದ ಆಫರ್ ನೀಡಿತ್ತು ಎನ್ನಲಾಗಿದೆ. ಆದರೆ ಜನರ ಆರೋಗ್ಯವನ್ನು ಹಾಳು ಮಾಡುವ ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲು ನಿರಾಕರಿಸಿರುವ ಯಶ್ ಈ ಕಾರಣಕ್ಕಾಗಿ ಮತ್ತೊಮ್ಮೆ ಜನಮನ್ನಣೆಗೆ ಪಾತ್ರರಾಗಿದ್ದಾರೆ.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ