Breaking News

ಇಂದಿನಿಂದ ಜೂ.15ರ ವರೆಗೆ ಸರಕಾರಿ ನೌಕರರ ವರ್ಗಾವಣೆ

Spread the love

ಬೆಂಗಳೂರು: 2022-23ನೇ ಸಾಲಿನಲ್ಲಿ ಮಾಡಲಾಗುವ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹೊರಡಿಸಿರುವ ಸರಕಾರ, ಆಯಾ ಇಲಾಖಾ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಿದೆ.

ಮಾರ್ಗಸೂಚಿ ಪ್ರಕಾರ, ಪ್ರತಿ ವರ್ಷ ಮೇ ಮತ್ತು ಜೂನ್‌ ತಿಂಗಳಲ್ಲಿ ಮಾತ್ರ ವರ್ಗಾವಣೆಗಳನ್ನು ಮಾಡಬಹುದು.

 

ಈ ಹಿನ್ನೆಲೆಯಲ್ಲಿ 2022-23ನೇ ಸಾಲಿಗೆ ಎ, ಬಿ, ಸಿ ಮತ್ತು ಡಿ ಗ್ರೂಪ್‌ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 2022ರ ಮೇ 1ರಿಂದ ಜೂ.15ರ ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿದೆ.

ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಶನಿವಾರ ಈ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ